Bhakti Bhandari Basavanna Vachana Collection
12ನೇ ಶತಮಾಣದ ವಚನಕಾರರ ಪೈಕಿ ಬಸವಣ್ಣನವರಿಗೆ ದೊಡ್ಡ ಸ್ಥಾನ. ಬಸವಣ್ಣನವರ ವಚನಗಳು ಬಹಳಷ್ಟು ಪ್ರಸಿದ್ಧಿ ಪಡೆದಿವೆ.ಬಸವಣ್ಣನವರು ಬಿಜಾಪುರ ಜಿಲ್ಲೆಯ ಬಸವನ ಬಾಗೇವಾಡಿ ಗ್ರಾಮದಲ್ಲಿ 1134 ರಲ್ಲಿ ಶ್ರೀ ಮಾದರಸ ಮತ್ತು ಮಾದಲಾಂಬಿಕೆ ದಂಪತಿಗಳಿಗೆ ಜನಿಸಿದರು. ಬಸವಣ್ಣನವರ ತಾಯಿಯ ತವರು ಮನೆಯಾದ ಇಂಗಳೇಶ್ವರ ಗ್ರಾಮದಲ್ಲಿ ಜನಿಸಿದರು ಎಂಬ ಪ್ರತೀತಿ ಇದೆ. ಅಕ್ಕ ನಾಗಮ್ಮ ಮತ್ತು ಭಾವ ಶಿವಸ್ವಾಮಿಯ ಜೊತೆಯಲ್ಲಿ ಬಾಲ್ಯವನ್ನು ಕಳೆದರು. ಬಸವಣ್ಣನವರು ಲಿಂಗಾಯತ ಸಮುದಾಯದ ಸ್ಥಾಪಕರು. ಬಸವಣ್ಣ ಚಿಕ್ಕಂದಿನಿಂದಲೂ ವೈದಿಕ ಸಂಸ್ಕೃತಿಯ ಕರ್ಮಾಚರಣೆಗಳ ವಿರೋಧಿಯಾಗಿದ್ದರು. ಬಸವಣ್ಣ ಕಲಚೂರಿ ಅರಸ ಬಿಜ್ಜಳನ ಆಸ್ಥಾನದಲ್ಲಿ ಮಂತ್ರಿಯಾಗಿದ್ದರು ಮತ್ತು ಸಾಮಾಜಿಕ ಸುಧಾರಕರಾಗಿದ್ದರು. ಬಸವಣ್ಣ ವಚನಗಳ ಮೂಲಕ ಸಾಮಾಜಿಕ ಅರಿವು ಹರಡಿದರು. ಬಸವಣ್ಣನವರನ್ನು "ಕರ್ನಾಟಕದ ಮಾರ್ಟಿನ್ ಲೂಥರ್" ಎಂದು ಕರೆಯುತ್ತಾರೆ. ಹೀಗೆ ಕರೆದವರು "ಸರ್ ಅರ್ಥರ್ ಮೈಲರ್". ಬಸವ ತನ್ನ ತಾಯಿಯ ಕಡೆಯಿಂದ ಸೋದರ ಸಂಬಂಧಿಯನ್ನು ಮದುವೆಯಾದ. ಅವರ ಪತ್ನಿ ಗಂಗಾಂಬಿಕೆ ಕಲಚುರಿ ರಾಜ ಬಿಜ್ಜಳ ಪ್ರಧಾನ ಮಂತ್ರಿಯ ಮಗಳು. ಬಸವೇಶ್ವರರು ಹನ್ನೆರಡು ವರ್ಷಗಳ ಕಾಲ ಕೂಡಲ ಸಂಗಮದಲ್ಲಿ ಅಧ್ಯಯನ ಮಾಡುತ್ತಾ ಕಳೆದರು. ಜಾತಿ, ಮತ, ಲಿಂಗಗಳ ಭೇದವನ್ನು ತಿರಸ್ಕರಿಸಿದ ಬಸವಣ್ಣನವರು ಸಾಮಾಜಿಕ ಕ್ರಾಂತಿಗೆ ಕಾರಣವಾದರು.
Read more
Advertisement
Advertisement